27 March 2012

ಮೀಟಲು ಆಗುವುದಿಲ್ಲ ! 
ಕಲ್ಲಿನ ವೀಣೆಯನು !
ಅರಿಯಲು ಸಾದ್ಯವಿಲ್ಲ ! 
ಮನಸಿನ ಭಾವನೆಯನು !
ಕಂಡು ಹಿಡಿಯಲು ಆಗುವುದಿಲ್ಲ !
 ಮೀನಿನ ಹೆಜ್ಜೆಯನು !
ಹಾಗೆಯೆ ! 
ಅನುಭವಿಸಬೇಕು ! 
ಸ್ನೇಹದ ! ಆನಂದವನು !
ವರ್ಣಿಸಲು ಸಾದ್ಯವಿಲ್ಲ ! 
ಸ್ನೇಹವೆಂದರೆ ಏನೆಂದು !
ಅನುಭವಿಸಬೇಕು ! 
ಆನಂದಿಸಬೇಕು ! 
ಕೇಳಬೇಡ ಏಕೆಂದು !
ಕಾಣದ ದೇವರ ನೆನೆದು ! 
ಅವನ ದಯೆ ಕೋರುವ ಜನ ನಾವು !
ಅರಿಯುವುದಿಲ್ಲ ಏಕೆ ನಿರ್ಮಲ ಸ್ನೇಹದ ನೋವು !
ಭಾವಿಸುವುದಿಲ್ಲ ಏಕೆ ! 
ಸ್ನೇಹ ಒಂದು ಮದುರ ಸಂಬಂದವೆಂದು !
ಕಟ್ಟುವಿರೆಕೆ ! ಅದಕೂ ! 
ಸಲ್ಲದ ಕಥೆಗಳನು !ಬದುಕು ಅಂದರೆ ! 
ಏನೆಂದು ! ಅರಿಯಬೇಕಿದೆ ನಾವಿಂದು !
ನಗಿಸಲು ಸಾದ್ಯವದಿದ್ದರೂ ಚಿಂತೆಯಿಲ್ಲ !
 ಆದರೆ ಸುಮ್ಮನೆ ಅಳಿಸಬೇಡಿ !
ಕಣ್ಣೀರು ಒರೆಸದಿದ್ದರೂ ಪರವಾಗಿಲ್ಲ ! 
ಆದರೆ ಸುರಿಯುವ ಹಾಗೆ ಮಾಡಬೇಡಿ !
ನಿಮಗೆ ಸ್ನೇಹದಲಿ ನಂಬಿಕೆ ಇರದಿದ್ದರೆ ಚಿಂತೆಯಿಲ್ಲ !
ಆದರೆ ನಂಬಿದವರ ನಂಬಿಕೆಯ ಕೆಡಿಸಬೇಡಿ !
ಜಗದಲಿ ! ಕಣ್ಣಿಲ್ಲದ್ದವರಿಗಿಂತ !
 ಕಣ್ಮುಚ್ಚಿ ಕುಳಿತವರೇ ಹೆಚ್ಚ್ಚು !
ಕನಸು ಕಾಣುವವರಿಗಿಂತ !
 ಕನಸು ಕಳೆದು ಕೊಂಡ ವರೇ ಹೆಚ್ಚು !
ಸ್ನೇಹದ ಲೋಕದಲಿ ಸ್ನೇಹದ ಬೆಲೆ ಎಂದಿಗೂ ಹೆಚ್ಚು

No comments:

Post a Comment